ಮಂಗಳೂರು| ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಮಂಗಳೂರು| ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಮಂಗಳೂರು| ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಆಕೆಯ ಮೃತದೇಹ ಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಸಮೀಪದ ‘ಮಣ್ಣ ಸಂಕ’ ಎಂಬಲ್ಲಿನ ಕಾಡು ಪ್ರದೇಶದಲ್ಲಿ ಶನಿವಾರ ಸ್ಥಳ ಮಹಜರು ನಡೆಸಿತು.

ಉಜಿರೆ ಎಸ್‌ಡಿಎಂ ಕಾಲೇಜಿಗೆ ತೆರಳಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯಾ 2012ರ ಅ.9ರಂದು ನಾಪತ್ತೆಯಾಗಿದ್ದಳು. ಆಕೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಮಣ್ಣಸಂಕದ ಸನಿಹ ದಲ್ಲಿ ರಸ್ತೆಯಿಂದ ಕೆಲವೇ ಮೀಟರ್‌ಗಳ ದೂರದ ಕಾಡಿನಲ್ಲಿ ಮರುದಿನ ಪತ್ತೆಯಾಗಿತ್ತು.

ಎಸ್‌ಐಟಿ ತನಿಖಾಧಿಕಾರಿಯಾಗಿರುವ ಎಸ್‌.ಪಿ ಲೋಕೇಶ ಜಗಲಾಸರ ಹಾಗೂ ಎಸಿಪಿ ಮನೋಜ್‌ ನಾಯ್ಕ್ ನೇತೃತ್ವದ ತಂಡ ಮಣ್ಣ ಸಂಕ ಪ್ರದೇಶದಲ್ಲಿ ಪರಿಶೀಲನೆ ನಡೆಸಿತು. ಬೆಳಿಗ್ಗೆ ಸುಮಾರು 11.30ರಿಂದ ಸಂಜೆ 4.45ರ ವರೆಗೂ ಅಧಿಕಾರಿಗಳ ತಂಡ ಸ್ಥಳದಲ್ಲಿತ್ತು.

ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಅಲ್ಲಿನ ಮಣ್ಣಿನ ಮಾದರಿ ಸಂಗ್ರಹಿಸಿದರು. ಸೌಜನ್ಯಾ ಅವರ ಮಾವ ಪುರಂದರ ಗೌಡ ಮತ್ತು ಸಂಬಂಧಿಕರಾದ ತುಕಾರಾಮ ಅವರು ಸ್ಥಳದಲ್ಲಿ ಹಾಜರಿದ್ದು ಪೊಲೀಸರಿಗೆ ಅಗತ್ಯ ಮಾಹಿತಿ ಒದಗಿಸಿದರು. ಎಸ್‌ಐಟಿ ಸಿಬ್ಬಂದಿ ಸ್ಥಳ ಮಹಜರು ಪ್ರಕ್ರಿಯೆಯನ್ನು ವಿಡಿಯೊ ಚಿತ್ರೀಕರಣ ಮಾಡಿಕೊಂಡರು.

‘ಮರು ತನಿಖೆಯ ಭಾಗವಾಗಿ ಸ್ಥಳ ಮಹಜರು ನಡೆಸಲಾಗಿದೆ. ಈ ಪ್ರಕರಣವನ್ನು ಈ ಹಿಂದೆ ತನಿಖೆ ನಡೆಸಿದ್ದ ಪೊಲೀಸ್‌ ಅಧಿಕಾರಿಗಳ ಹೇಳಿಕೆ ದಾಖಲಿಸುವ ಪ್ರಕ್ರಿಯೆಯೂ ನಡೆಯುತ್ತಿದೆ. ಸ್ಪಷ್ಟ ಚಿತ್ರಣ ಸಿಗುವವರೆಗೆ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿ ಯಲಿದೆ’ ಎಂದು ಎಸ್‌ಐಟಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ